ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದರಾಸಗಳಲ್ಲಿ ಇನ್ಮುಂದೆ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ, ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ. ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ. ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.
ಹಿಂದಿ ಭಾಷೆ ಹೇರಿಕೆ ಮಾಡೋ ಕೆಲಸ ಕೇಂದ್ರ ಮಾಡ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದ ವಿರೋಧಿ ಆಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಕೊಟ್ಟರೂ ಅದಕ್ಕೆ ಅಗತ್ಯ ಸಹಕಾರ ಕೇಂದ್ರ ಕೊಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

