ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಾಳಿಯಲ್ಲಿ ನಿನ್ನೆ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟಿದ್ದರು. ಒಟ್ಟಾರೆ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಅಮೀರಾ ಕಡಲ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಿನ್ನೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ 20 ನಾಗರಿಕರಿಗೆ ಗಾಯವಾಗಿತ್ತು. ಗ್ರೆನೇಡ್ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!