April 5, 2026
Sunday, April 5, 2026
spot_img

ಮಳೆರಾಯನ ಆರ್ಭಟ ಕೊಂಚ ಇಳಿಕೆ: ರಾಜ್ಯದಲ್ಲಿ ಹೇಗಿದೆ ನೋಡಿ ಇಂದಿನ ಹವಾಮಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಮಳೆರಾಯನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಇಂದು ಎಲ್ಲೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ.

ಕರಾವಳಿಯಲ್ಲೂ ಸಧ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !