ಹೊಸದಿಗಂತ ಡಿಜಿಟಲ್ ಡೆಸ್ಕ್
ಗಾಯದಿಂದ ಚೇತರಿಸಿಕೊಂಡಿರುವ ಅಕ್ಷರ್ ಪಟೇಲ್ ಅವರನ್ನು ಬೆಂಗಳೂರು ಟೆಸ್ಟ್‌ಗೆ ತಂಡದಲ್ಲಿ ಸೇರ್ಪಡೆಗೊಳಿಸಲಾಗಿದೆ.
ಅವರಿಗೆ ಸ್ಥಾನ ಕಲ್ಪಿಸಿಕೊಡಲು ಚೈನಾಮನ್ ಸ್ಪಿನ್ನರ್ ಕುಲದೀಪ್ ಯದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮೊಣಕಾಲು ಗಾಯ ಹಾಗೂ ಕೊರೋನಾ ಸೋಂಕಿಗೊಳಗಾಗಿದ್ದ ಅಕ್ಷರ್ ಪಟೇಲ್ ಅವರು ದಕ್ಷಿಣ ಆಪ್ರಿಕಾ ಸರಣಿ, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ವಿರುದ್ಧದ ಸರಣಿಗಳಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಅಕ್ಷರ್ ಪಟೇಲ್ ನಮ್ಮ ಮೊದಲ ಆಯ್ಕೆ, ತಂಡದಲ್ಲಿ ನಾಲ್ವರು ಸ್ಪಿನ್ನರ್ ಗಳು ಬೇಡ ಎಂಬ ಕಾರಣಕ್ಕೆ ಕುಲದೀಪ್ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಮಾ.12ರಿಂದ ಆರಂಭಗೊಳ್ಳಲಿದೆ. ಮೊದಲ ಟೆಸ್ಟ್ ನಲ್ಲಿ ಭಾರತ ಇನ್ನಿಂಗ್ಸ್ ಹಾಗೂ 222 ರನ್ ಗಳಿಂದ ಭರ್ಜರಿ ಜಯ ದಾಖಲಿಸಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ