ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಗೆ ಇನ್ನೇನು ಕೆಲವೇ ವಾರಗಳು ಬಾಕಿ ಉಳಿದಿವೆ. ಈಗಾಗಲೇ ಎಲ್ಲಾ 10 ತಂಡಗಳು ಭರ್ಜರಿ ತಯಾರಿ ಆರಂಭಿಸಿವೆ.
ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಠಿಣ ಅಭ್ಯಾಸದಲ್ಲಿ ನಿರತವಾಗಿದ್ದು, ಮತ್ತೊಮ್ಮೆ ಕಪ್ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ. ಈ ನಡುವೆ ಇದೀಗ ಅಂತಾರಾಷ್ಟ್ರೀಯ ಬೌಲರ್ ಒಬ್ಬರು ಸಿಎಸ್ ಕೆ ತಂಡವನ್ನು ಸೇರಿಕೊಂಡಿದ್ದಾರೆ.
ಐರ್ಲೆಂಡ್ ಎಡಗೈವೇಗಿ ಜೋಶ್ ಲಿಟಲ್ ಅವರು ಚೆನ್ನೈ ಸೂಪರ್ ಕಿಂಗ್ಸ್ ನೆಟ್ ಬೌಲರ್ ಆಗಿ ತಂಡವನ್ನು ಕೂಡಿಕೊಂಡಿದ್ದಾರೆ. ಸಿಎಸ್‌ಕೆ ಗೆ ನೆಟ್ ಬೌಲರ್ ಆಗಿ ಆಯ್ಕೆಯಾಗಿರುವ ಲಿಟಲ್ ಅವರಿಗೆ ಅಭಿನಂದನೆಗಳು, ಅಂತಹ ಶ್ರೇಷ್ಟ ತಂಡದಲ್ಲಿ ಸ್ಥಾನ ಪಡೆಯುವುದೇ ವಿಶೇಷ ಅನುಭವ ಎಂದು ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಟ್ವೀಟ್ ಮಾಡಿದೆ.
22 ವರ್ಷದ ಜೋಶ್ ಲಿಟಲ್ ಈವರೆಗೆ ಐರ್ಲೆಂಡ್ ಪರ 19 ಏಕದಿನ ಪಂದ್ಯಗಳಲ್ಲಿ 30 ಮತ್ತು 24 ಟಿ20 ಪಂದ್ಯಗಳಲ್ಲಿ31 ವಿಕೆಟ್ ಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸದ್ಯ ಸೂರತ್ ನ ಲಾಲ್ ಭಾಯ್ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ