ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಪುಟ ಪುನರ್ರಚನೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಚಿವರಾಗುವ ಅರ್ಹತೆ ಬಹಳಷ್ಟು ಜನರಿಗಿದೆ. ಆದರೆ ಕೇವಲ 34 ಮಂದಿಗೆ ಮಾತ್ರ ಮಂತ್ರಿಯಾಗಲು ಅವಕಾಶವಿದೆ. ಇನ್ನು ಯಾರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು. ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಸಂಬಂಧ ನನ್ನ ಬಳಿ ಕೇಳಿದರೆ ನಾನೇನು ಹೇಳಲು ಸಾಧ್ಯವಿಲ್ಲ, ಅಧಿಕಾರವೂ ಇಲ್ಲ ಎಂದರು.
ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಬಹಿರಂಗವಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಹೇಳಿದ್ದಾರೆ ಎಂದರು, ಇನ್ನು ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗದ ಬಗ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಹೇಳಿದರೆ ನಾವು ಕೂಡ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

                                    