ಬಿಜೆಪಿಗೆ ಪಕ್ಷಾಂತರಗೊಂಡ ಶಾಸಕರ ಅನರ್ಹತೆಗೆ ಸುಪ್ರೀಂ ಮೆಟ್ಟಿಲೇರಿದ ಗೋವಾ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:
2017ರ ಚುನಾವಣೆಯಲ್ಲಿ ಕಾಂಗ್ರೆಸ್‌ ನಿಂದ ಗೆದ್ದು ಬಳಿಕ ಬಿಜೆಪಿಗೆ ಪಕ್ಷಾಂತರಗೊಂಡ 10 ಮಂದಿ ಶಾಸಕರ ವಿರುದ್ಧ ಗೋವಾ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
ಪಕ್ಷಾಂತರ ಮಾಡಿದ ಶಾಸಕರನ್ನು ಅನರ್ಹಗೊಳಿಸುವಂತೆ ಹೋವಾ ಕಾಂಗ್ರೆಸ್‌ ಘಟಕವು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
2017ರಲ್ಲಿ 13 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಪಕ್ಷವು ಗೋವನ್‌ ಫಾರ್ವರ್ಡ್‌ ಪಾರ್ಟಿ, ಎಂಜಿಪಿ ಮತ್ತು ಕಾಂಗ್ರೆಸ್‌ ಶಾಸಕರ ಬೆಂಬಲ ಪಡೆದು ಅಧಿಕಾರಕ್ಕೇರಿತ್ತು. ಈ ವೇಳೆ ಕಾಂಗ್ರೆಸ್‌ ನ 15 ಶಾಸಕರ ಪೈಕಿ 10 ಮಂದಿ ಬಿಜೆಪಿ ಸೇರ್ಪಡೆಯಾಗಿದ್ದರು. ಕಾಂಗ್ರೆಸ್‌ 3 ರಲ್ಲಿ 2 ರಷ್ಟು ಭಾಗ ಶಾಸಕರು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್‌ ತೀರ್ಪಿತ್ತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!