Tuesday, November 4, 2025

ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಮ್ಯಾಚ್: ಸೂರ್ಯಕುಮಾರ್ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:


ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟಿ20 ಪಂದ್ಯ ಹೋಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಈ ಪಂದ್ಯವು ಸರಣಿ ಗೆಲ್ಲಲು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ.

ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸರಣಿಯಲ್ಲಿ ಸಮಬಲ ಸಾಧಿಸಬಹುದು. ಅಲ್ಲದೆ 4ನೇ ಮತ್ತು 5ನೇ ಪಂದ್ಯಗಳಲ್ಲಿ ಗೆದ್ದು ಸರಣಿ ಜಯಿಸುವ ಅವಕಾಶವನ್ನು ಹೊಂದಿದೆ. ಹೀಗಾಗಿ ಸರಣಿ ಗೆಲ್ಲಬೇಕಿದ್ದರೆ ಇಂದಿನ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಲೇಬೇಕು.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 3 ಬದಲಾವಣೆ ಮಾಡಿಕೊಂಡಿದೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ ಪ್ಲೇಯಿಂಗ್ 11: ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.

(ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಹೊರಕ್ಕೆ).

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್.

error: Content is protected !!