Sunday, January 11, 2026

ಡೇವಿಡ್-ಸ್ಟೋನಿಸ್ ಭರ್ಜರಿ ಬ್ಯಾಟಿಂಗ್: ಭಾರತಕ್ಕೆ ಬಿಗ್ ಟಾರ್ಗೆಟ್ ನೀಡಿದ ಆಸೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟಿಮ್ ಡೇವಿಡ್ ಹಾಗೂ ಮಾರ್ಕಸ್ ಸ್ಟೋನಿಸ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೂರನೇ ಟಿ20 ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿದೆ.

ಆಸ್ಟ್ರೇಲಿಯಾ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಬಾರಿಸಿದ್ದು, ಭಾರತಕ್ಕೆ ಸವಾಲಿನ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಅರ್ಶದೀಪ್ ಸಿಂಗ್ ಶಾಕ್ ನೀಡಿದರು.ಮೊದಲ ಓವರ್‌ನ ನಾಲ್ಕನೇ ಎಸೆತದಲ್ಲೇ ಟ್ರ್ಯಾವಿಸ್ ಹೆಡ್(6) ವಿಕೆಟ್ ಕಬಳಿಸಿದರು. ಇನ್ನು ಅರ್ಶದೀಪ್ ಎಸೆದ ಎರಡನೇ ಓವರ್‌ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಶ್(1)ಗೆ ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು ನಾಯಕ ಮಿಚೆಲ್ ಮಾರ್ಷ್(11) ಹಾಗೂ ಮಿಚೆಲ್ ಓವನ್ ಅವರನ್ನು(0) ಸತತ ಎರಡು ಎಸೆತಗಳಲ್ಲಿ ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿ ಬಲಿ ಪಡೆಯುವ ಮೂಲಕ ಭಾರತಕ್ಕೆ ಮೇಲುಗೈ ತಂದುಕೊಟ್ಟರು. ಒಂದು ಹಂತದಲ್ಲಿ ಆಸ್ಟ್ರೇಲಿಯಾ ತಂಡವು 73 ರನ್‌ ಗಳಿಗೆ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿತ್ತು.

ಆರಂಭಿಕ ವಿಕೆಟ್ ಪತನದಿಂದ ಕಂಗಾಲಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಟಿಮ್ ಡೇವಿಡ್ ಹಾಗೂ ಮಾರ್ಕಸ್ ಸ್ಟೋನಿಸ್ ಆಸರೆಯಾದರು.

ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಟಿಮ್ ಡೇವಿಡ್ ಕೇವಲ 38 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಸ್ಪೋಟಕ 74 ರನ್ ಸಿಡಿಸಿ ಶಿವಂ ದುಬೆಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೋರ್ವ ಆಲ್ರೌಂಡರ್ ಮಾರ್ಕಸ್ ಸ್ಟೋನಿಸ್ ಕೂಡಾ ವಿಸ್ಪೋಟಕ ಅರ್ಧಶತಕ ಸಿಡಿಸಿದರು. ಸ್ಟೋನಿಸ್ ಕೇವಲ 39 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 64 ರನ್ ಸಿಡಿಸಿ ಅರ್ಶದೀಪ್ ಸಿಂಗ್‌ಗೆ ಮೂರನೇ ಬಲಿಯಾದರು.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!