ಪಂಜಾಬ್ ನಲ್ಲಿ ಆಮ್​ ಆದ್ಮಿ ಪಕ್ಷದಿಂದ ವಿಜಯೋತ್ಸವದ ರೋಡ್​​ ಶೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆ ಭಾನುವಾರ ಆಪ್​ ನಾಯಕರು ವಿಜಯೋತ್ಸವದ ರೋಡ್​​ ಶೋ ನಡೆಸಿದರು. ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಹಾಗೂ ಪಂಜಾಬ್​ನ ನಿಯೋಜಿತ ಮುಖ್ಯಮಂತ್ರಿ ಭಗವಂತ್​ ಮನ್ ಭರ್ಜರಿ ರೋಡ್​ ಶೋನಲ್ಲಿ ಭಾಗವಹಿಸಿದ್ದರು.
ಇನ್ನು ಭಗವಂತ್ ಮಾನ್​​ ಬುಧವಾರ (ಮಾ.16) ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಮಾನ್​ ಸಚಿವ ಸಂಪುಟದಲ್ಲಿ 16 ಜನರಿಗೆ ಸ್ಥಾನ ಸಿಗಲಿದ್ದು, ಸಚಿವರು ಮುಂದಿನ ದಿನಗಳಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಬುಧವಾರ ನಿಯೋಜಿತ ಮುಖ್ಯಮಂತ್ರಿ ಭಗವಂತ್​ ಮಾನ್​ ಏಕಾಂಗಿಯಾಗಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರ ಭಗತ್​ ಸಿಂಗ್ ಅವರ ಹುಟ್ಟೂರಾದ ಖತ್ಕರ್​ಕಲನ್ ಗ್ರಾಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!