Monday, November 3, 2025

ನಿರ್ಣಾಯಕ ಘಟ್ಟದಲ್ಲಿ ರೇಣುಕಾಸ್ವಾಮಿ ಪ್ರಕರಣ: ದೈವಬಲದ ಮೊರೆಹೋದ ದರ್ಶನ್ ಪತ್ನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಆರೋಪಿಗಳ ವಿರುದ್ಧ ಆರೋಪ ನಿಗದಿ ಮಾಡುವ ವಿಚಾರದಲ್ಲಿ ಬೆಂಗಳೂರಿನ ಸಿಸಿಹೆಚ್ ನ್ಯಾಯಾಲಯ ವಿಚಾರಣೆ ನಡೆಸಲಿದೆ. ಈ ವೇಳೆ ನಟ ದರ್ಶನ್ ಹಾಗೂ ಸಹ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಆರೋಪ ನಿಗದಿಯಾದ ಬಳಿಕ ಮುಂದಿನ ಟ್ರಯಲ್ ದಿನಾಂಕ ನಿಗದಿಯಾಗಲಿದ್ದು, ಈ ಹಿನ್ನೆಲೆ ನಾಳೆ ದರ್ಶನ್‌ಗಾಗಿ ಅತ್ಯಂತ ನಿರ್ಣಾಯಕ ದಿನವಾಗಲಿದೆ. ಇಂತಹ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದ ಮೂಲಕ ದೇವರ ಶರಣಾಗುವ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಅಸ್ಸಾಂನ ಪ್ರಸಿದ್ಧ ಕಾಮಾಕ್ಯ ದೇವಾಲಯಕ್ಕೆ ಧಾರ್ಮಿಕ ನಂಬಿಕೆಯಿಂದ ಆಗಾಗ್ಗೆ ತೆರಳುವ ವಿಜಯಲಕ್ಷ್ಮಿ, ಈ ಬಾರಿ ಸಹ ಸಂಕಷ್ಟದ ಸಂದರ್ಭದಲ್ಲಿ ದೇವರ ಶರಣಾಗಿರುವುದನ್ನು ಸೂಚಿಸುವ ಫೋಟೋವನ್ನು ಇನ್‌ಸ್ಟಾಗ್ರಾಂ ಸ್ಟೋರಿಯಾಗಿ ಹಂಚಿಕೊಂಡಿದ್ದಾರೆ. ಕಾಮಾಕ್ಯ ದೇವಿಗೆ ಪ್ರಿಯವಾದ ಕಮಲದ ಹೂ ಹಿಡಿದಿರುವ ಚಿತ್ರವನ್ನು ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ, “ನಮಗೆ ಕಾಣದಿರುವುದು ಬಹಳಷ್ಟಿದೆ, ಆದ್ದರಿಂದ ಯಾವಾಗಲೂ ರಕ್ಷಣೆಗಾಗಿ ಪ್ರಾರ್ಥಿಸಿ,” ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಪ್ರಸ್ತುತ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿದ್ದಾರೆ. ಕಳೆದ ಬಾರಿ ಜಾಮೀನು ಪಡೆಯುವ ಸಂದರ್ಭದಲ್ಲಿ ವಿಜಯಲಕ್ಷ್ಮಿ ಕಾನೂನು ಹೋರಾಟದ ಜೊತೆಗೆ ದೇವರಿಗೆ ಹರಕೆ ಹೊತ್ತು ಪೂಜೆ ಸಲ್ಲಿಸಿದ್ದರು. ಈಗ ಮತ್ತೊಮ್ಮೆ ಪ್ರಕರಣದಲ್ಲಿ ನಿರ್ಣಾಯಕ ಘಟ್ಟ ತಲುಪಿರುವ ಸಂದರ್ಭದಲ್ಲಿ ಕಾಮಾಕ್ಯ ದೇವಿಯ ನಂಬಿಕೆಯನ್ನೇ ಪುನಃ ವ್ಯಕ್ತಪಡಿಸಿದ್ದಾರೆ.

error: Content is protected !!