ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಹಾಗು ಬಿಗ್ ಬಾಸ್ ಖ್ಯಾತಿಯ ರಾಕೇಶ್ ಬಾಪಟ್ ನಡುವಿನ ಸಂಬಂಧದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವಂದತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು.
ಆದರೆ, ನಟಿ ಶಮಿತಾ ಶೆಟ್ಟಿ ಮತ್ತು ರಾಕೇಶ್ ಬಾಪಟ್ ನಡುವೆ ಎಲ್ಲವೂ ಚೆನ್ನಾಗಿದೆ ಎಂಬುವುದು ಸಾಬೀತಾಗಿದೆ. ಭಾನುವಾರ ರಾತ್ರಿ, ‘ಹಲೋ! ಹಾಲ್ ಆಫ್ ಫೇಮ್ ಅವಾರ್ಡ್ಸ್ 2022’ ಸಮಾರಂಭದಲ್ಲಿ ಒಟ್ಟಿಗೆ ಆಗಮಿಸುವ ಮೂಲಕ ವದಂತಿಗಳಿಗೆ ಬ್ರೇಕ್ ಬಿದ್ದಿದೆ.
ಮುಂಬೈನಲ್ಲಿ ಸ್ಟಾರ್- ಸ್ಟಡ್ಡ್ ಗಾಲಾದಲ್ಲಿ ರೆಡ್ ಕಾರ್ಪೆಟ್ ಮೇಲೆ ಶಮಿತಾ ಮತ್ತು ರಾಕೇಶ್ ಫೋಟೋಗಳಿಗೆ ಫೋಸ್ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಶಮಿತಾ ಮತ್ತು ರಾಕೇಶ್ ಕಳೆದ ವರ್ಷ ಬಿಗ್ ಬಾಸ್ ಒಟಿಟಿಯಲ್ಲಿ ಪರಸ್ಪರ ಭೇಟಿಯಾಗಿದ್ದರು. ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಶಾರಾ ಎಂದು ಕರೆಯುತ್ತಾರೆ. ಆದಾಗ್ಯೂ, ಕೆಲವು ದಿನಗಳ ಹಿಂದೆ ಈ ಜೋಡಿ ತಮ್ಮ ಸಂಬಂಧ ಕೊನೆಗೊಳಿಸಿದ್ದಾರೆ ಎಂದು ವರದಿಯಾಗಿತ್ತು.
ಇನ್ನು ಇನ್ಸ್ಟಾಗ್ರಾಮ್ ನಲ್ಲಿ ವದಂತಿಗಳನ್ನು ತಳ್ಳಿಹಾಕಿದಶಮಿತಾ, ನಮ್ಮ ಸಂಬಂಧಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವದಂತಿಗಳನ್ನು ನಂಬಬೇಡಿ ಎಂದು ನಾವು ವಿನಂತಿಸುತ್ತೇವೆ. ಇದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.