ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಕಳೆದ 2 ದಿನಗಳ ಹಿಂದೆ ಕಾಡಾನೆ ದಾಳಿಗೆ ಇಬ್ಬರು ರೈತರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಈ ಕಾಡಾನೆಯ ಸೆರೆಗೆ ಸರ್ಕಾರ ಆದೇಶ ನೀಡಿದ್ದು, ಸುಮಾರು 6 ಸಾಕಾನೆಗಳ ನೆರೆವಿನೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ಆರಂಭಿಸಿದ್ದಾರೆ.
ಆನೆ ದಾಳಿಯಿಂದ ಮೃತಪಟ್ಟ ಕುಟುಂಬಗನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಾಚಾರಣೆ ನಡೆಸಿ ಆನೆ ಸೆರೆ ಹಿಡಿದು ಕೂಡಲೆ ಇಲ್ಲಿಂದ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ. ಕಾಂಡಚಿನಲ್ಲಿರುವ ಸುಮಾರು 17 ಮನೆಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ ಪರ್ಯಾಯ ಜಾಗ ನೀಡಲು ತೀರ್ಮಾನಿಸಲಾಗಿದೆ. ಕಾಡಾನೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಅರಣ್ಯ ಸಚಿವರ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

