ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ನಡೆದ ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಗೆ ತೆರೆ ಬಿದ್ದಿದೆ. ಮಹಿಳೆಯರ ಸಿಂಗಲ್ಸ್‌ನಲ್ಲಿ ಭಾರತದ 3ನೇ ಶ್ರೇಯಾಂಕದ ಮಾನ್ಸಿ ಸಿಂಗ್ ಗೆಲುವು ಸಾಧಿಸಿದ್ದಾರೆ. ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಅಗ್ರ ಶ್ರೇಯಾಂಕಿತ ಆಟಗಾರ ರಿತ್ವಿಕ್ ಸಂಜೀವಿ ಸತೀಶ್ ಕುಮಾರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಮಹಿಳೆಯರ ಡಬಲ್ಸ್ ಫೈನಲ್ ಪಂದ್ಯದಲ್ಲಿ 5ನೇ ಶ್ರೇಯಾಂಕದ ಥಾಯ್ಲೆಂಡ್ ಆಟಗಾರರಾದ ಹತಾಯ್‌ತಿಪ್ ಮಿಜದ್ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯು ಭಾರತದ ಶ್ರೀನಿಧಿ ನಾರಾಯಣನ್ ಮತ್ತು ರೆಶಿಕಾ ಜೋಡಿಯನ್ನು 21-7, 21-11 ಸೆಟ್‌ಗಳಿಂದ ಪರಾಭವಗೊಳಿಸಿದೆ. ಮಿಕ್ಸೆಡ್ ಡಬಲ್ಸ್‌ನಲ್ಲಿ ಭಾರತದ ಎರಡನೇ ಶ್ರೇಯಾಂಕದ ಧ್ರುವ ರಾವತ್ ಮತ್ತು ಮನೀಷಾ ಕೆ ಜೋಡಿಯು 18-21, 21-18 ಮತ್ತು 22-20 ಸೆಟ್‌ಗಳಿಂದ ಥಾಯ್ಲೆಂಡಿನ ತನಾವಿನ್ ಮ್ಯಾದೀ ಮತ್ತು ನಪಪಕೊರ್ನ್ ತುಂಗ್ಕಸತಾನ್ ಜೋಡಿಯನ್ನು ಮಣಿಸಿದೆ.

