Wednesday, November 5, 2025

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಮಹಿಳಾ ತಂಡದ ಬಹುಕಾಲದ ಕನಸು ಕೊನೆಗೂ ನನಸಾಗಿದೆ. ಅದು ಕೂಡ ತವರಿನಲ್ಲಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 50 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 298 ರನ್​ಗಳು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್​​ಗಳಲ್ಲಿ 246 ರನ್​ಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ಮಹಿಳಾ ತಂಡ 52 ರನ್​ಗಳ ಜಯ ಸಾಧಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟೀಮ್ ಇಂಡಿಯಾ ಕೋಟಿ ರೂ. ಬಹುಮಾನ ಮೊತ್ತವನ್ನು ಸಹ ಪಡೆದುಕೊಂಡಿದೆ.

ಮಹಿಳಾ ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಪ್ರಶಸ್ತಿ ಮೊತ್ತವನ್ನು ಹೆಚ್ಚಿಸುವುದಾಗಿ ತಿಳಿಸಿದ್ದರು. ಅದರಂತೆ ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಬಹುಮಾನ ಮೊತ್ತವಾಗಿ 4.48 ಅಮೆರಿಕನ್ ಮಿಲಿಯನ್ ಡಾಲರ್ ಲಭಿಸಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 40 ಕೋಟಿ ರೂ.

error: Content is protected !!