ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 103 ವರ್ಷದ ವೃದ್ಧನಿಗೆ 10 ವರ್ಷ ಜೈಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ 103 ವರ್ಷ ವಯಸ್ಸಿನ ವೃದ್ಧನಿಗೆ ತಮಿಳುನಾಡಿನ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.
2018ರಲ್ಲಿ ಪ್ರಕರಣ ನಡೆದಿತ್ತು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಪರಶುರಾಮನ್ ಎಂಬಾತ ಚೆನೈ ಹೊರವಲಯದ ಪೊನಮಲ್ಲಿ ಸಮೀಪದ ಊರೊಂದರಲ್ಲಿ 5 ಮನೆಗಳನ್ನು ಬಾಡಿಗೆಗೆ ನೀಡಿದ್ದ. ಬಾಲಕಿ ಕುಟುಂಬವೂ ಆ ಮನೆಗಳಲ್ಲಿ ವಾಸಿಸುತ್ತಿತ್ತು.
ಅಲ್ಲೇ ಸಮೀಪದಲ್ಲಿ ವಾಸಿಸುತ್ತಿದ್ದ ವೃದ್ಧ ಬಾಲಕಿಗೆ ಚಾಕೋಲೆಟ್‌ ಆಮಿಷ ತೋರಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಇದರಿಂದ ಬೆದರಿದ್ದ ಬಾಲಕಿಗೆ ಆರೋಗ್ಯ ಹದಗೆಟ್ಟಿದ್ದು, ಪೋಷಕರು ಈ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಪೋಷಕರ ದೂರಿನಂತೆ ಪೋಕ್ಸೊ ಕಾಯ್ದೆಯಡಿ ಪೊಲೀಸರು ವೃದ್ಧನನ್ನು ವಶಕ್ಕೆ ಪಡೆದಿದ್ದರು.
ಈ ಬಗ್ಗ ತಿರುವಳ್ಳೂರಿನ ಮಹಿಳಾ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ವೇದ್ಧ ಧೋಷಿಯೆಂದು ತೀರ್ಪು ಹೊರಬಿದ್ದಿದ್ದು, ಆತನಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ, 5,000 ರೂ. ದಂಡವನ್ನು ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ 45,000 ರೂ. ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!