ಹೊಸದಿಗಂತ ವರದಿ, ಮಂಗಳೂರು:
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟದ ಪ್ರಕರಣವೊಂದನ್ನು ಕಸ್ಟಮ್ಸ್ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.
ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ಗುದನಾಳದಲ್ಲಿ ರೂ.36.53,550 ಮೌಲ್ಯದ ಚಿನ್ನವನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಆರೋಪಿ ತನ್ನ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ 24 ಕ್ಯಾರೆಟ್ನ 706 ಗ್ರಾಂ ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.