ಭಾರತದಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ 3.2 ಲಕ್ಷಕೋಟಿ ಹೂಡಿಕೆ: ಜಪಾನ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಭಾರತದಲ್ಲಿ 3.2 ಲಕ್ಷಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಜಪಾನ್‌ ಪ್ರಧಾನಿ ಫುಮಿಯೊ ಕಿಶಿದಾ ಘೋಷಣೆ ಮಾಡಿದ್ದಾರೆ.
14 ನೇ ಇಂಡೋ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ ಜಪಾನ್ ಪ್ರಧಾನಿ ಕಿಶಿದಾ ಈ ವಿಚಾರ ಘೋಷಿಸಿದ್ದಾರೆ. ಉಭಯ ದೇಶಗಳ ನಡುವಿನ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದೆ.
ಇಂದನ ಕ್ಷೇತ್ರದಲ್ಲಿ ಪಾಲುದಾರಿಕೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸುವ ಸಂಬಂಧ ಆರು ಪ್ರತ್ಯೇಕ ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಈ ವೇಳೆ ಸಹಿಹಾಕಿವೆ.
ಭಾರತದಲ್ಲಿನ ಜಪಾನ್ ಕಂಪನಿಗಳಿಗೆ ಎಲ್ಲಾ ತೆರನಾದ ಸಹಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಉಕ್ರೇನ್‌ ಮತ್ತು ರಷ್ಯಾ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ ಕಿಷಿಡ, ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣ ತುಂಬಾ ಗಂಭೀರವಾದ ವಿಚಾರವಾಗಿದೆ. ರಾಷ್ತ್ರಗಳ ನಡುವಿನ ಕದನ ಅಂತಾರಾಷ್ಟ್ರೀಯ ಕಾನೂನುಗಳ ಅನ್ವಯ ಶಾಂತಿಯುವ ಪರಿಹಾರ ಕಾಣಬೇಕಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!