ಪುನೀತ್- ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ: ರಾಘವೇಂದ್ರ ರಾಜ್‍ಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನು ಮುಂದೆ ಪುನೀತ್ ರಾಜ್‍ಕುಮಾರ್ ಹಾಗೂ‌ ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕವನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ನೀಡಲಾಗುವುದು ಎಂದು ರಾಘವೇಂದ್ರ ರಾಜ್‍ಕುಮಾರ್ ತಿಳಿಸಿದ್ದಾರೆ.
ಮೈಸೂರು ವಿವಿಯ 102 ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಮುಂದಿನ ವರ್ಷದಿಂದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬಿಸ್ನೆಸ್​ ಮ್ಯಾನೇಜ್‌ಮೆಂಟ್‌ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಲಲಿತ ಕಲಾ ವಿಭಾಗದಲ್ಲಿ ಒಂದು ಚಿನ್ನದ ಪದಕ ನೀಡಲಾಗುವುದು ಎಂದರು.
ನನ್ನ ತಮ್ಮನಿಗೆ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ದಾರೆ. ಈ ಗೌರವ ನಮ್ಮ ಕುಟುಂಬದ ಜವಾಬ್ದಾರಿಯನ್ನು ಹೆಚ್ಚಿಸಿದೆ. ಅಶ್ವಿನಿ ಅವರ ಮಾರ್ಗದರ್ಶನದಲ್ಲಿ ಅಪ್ಪು ಅವರಂತೆ ಒಳ್ಳೆಯ ಮಾರ್ಗದಲ್ಲಿ ಸಾಮಾಜಿಕ ಸೇವೆಗಳನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!