ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಬಿರ್ಭೂಮ್ ಹಿಂಸಾಚಾರ ಪ್ರಕರಣದ ವಿಚಾರಣೆಯನ್ನು ಎಸ್ಐಟಿಗೆ ದೀದಿ ಸರಕಾರ ನೀಡಿದ್ದು, ಇದೀಗ ತನಿಖೆ ನಿಲ್ಲಿಸುವಂತೆ ನಿರ್ದೇಶನ ನೀಡಿದೆ. ಇದನ್ನು ತನಿಖೆ ನಡೆಸಲು ಕೇಂದ್ರದ ತನಿಖಾ ದಳಗಳಿಗೆ ಅನುಮತಿ ನೀಡಬಾರದು ಎಂಬ ಸಿಎಂ ಮಮತಾ ಬ್ಯಾನರ್ಜಿ ಮಾಡಿದ ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ.
ಇದೀಗ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಸಿಬಿಐಗೆ ವಹಿಸಲಾಗಿದ್ದು, ಏಪ್ರಿಲ್ 7ರೊಳಗೆ ವರದಿಯನ್ನು ಸಲ್ಲಿಸಬೇಕೆಂದು ಸೂಚನೆ ನೀಡಿದೆ.
ನ್ಯಾಯದ ಹಿತದೃಷ್ಟಿಯಿಂದ ಹಾಗು ಸಮಾಜದಲ್ಲಿ ವಿಶ್ವಾಸ ತುಂಬಲು ಸತ್ಯ ಹೊರತೆಗೆಯಲು ನ್ಯಾಯಯುತ ತನಿಖೆ ನಡೆಸಬೇಕಿದೆ. ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತಿದ್ದೇವೆ. ಮುಂದಿನ ತನಿಖೆಯನ್ನು ಕೈಗೊಳ್ಳಲು ಸಿಬಿಐಗೆ ಸಂಪೂರ್ಣ ಸಹಕಾರ ನೀಡುವಂತೆ ನಾವು ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇವೆ ಎಂದು ನ್ಯಾಯಪೀಠ ಆದೇಶಿಸಿದೆ.
ತೃಣಮೂಲ ಕಾಂಗ್ರೆಸ್ ನಾಯಕ ಭಾದು ಶೇಖ್ ಹತ್ಯೆಯ ನಂತರ ಎಂಟು ಜನರನ್ನು ಸುಟ್ಟುಹಾಕಿದ ಬಿರ್ಭೂಮ್ ಘಟನೆಯನ್ನು ಕೋಲ್ಕತ್ತಾ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಬಿಜೆಪಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿವೆ.