ಏಪ್ರಿಲ್ 5ಕ್ಕೆ ರಾಜ್ಯಕ್ಕೆ ಪ್ರಧಾನಿಗಳ ಭೇಟಿ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್
ಹುಬ್ಬಳ್ಳಿ: ಏಪ್ರಿಲ್ 5ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದಲ್ಲದೆ ಏಪ್ರಿಲ್ 1 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು ಸುಧಾರಣೆಗಳನ್ನು ತರಬೇಕೆಂಬ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಕ್ಷೀರ ಅಭಿವೃದ್ಧಿ ಬ್ಯಾಂಕ್ ಪ್ರಾರಂಭ ಮಾಡಲು ಉದ್ದೇಶಿಸಿದೆ. ಅದರ ಲಾಂಛನದ ಉದ್ಘಾಟನೆ ಮಾಡಲು ಬೃಹತ್ ಸಭೆ ಏರ್ಪಾಡು ಮಾಡಲಾಗುತ್ತಿದೆ. ಕ್ಷೀರ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಗೆ ಇಂಬು ನೀಡಿ ಆರ್ಥಿಕ ಕ್ರಾಂತಿಯಾಗಲಿದೆ. ಇದರಿಂದ ರೈತರ ಆದಾಯ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಲಿದೆ. ರೈತರಿಗೆ ಆರ್ಥಿಕ ಸಹಾಯ ದೊರೆಯಲು ನೆರವಾಗಲಿದೆ. ಲಾಂಛನ ಹಾಗೂ ಯಶಸ್ವಿನಿ ಯೋಜನೆಯ ಉದ್ಘಾಟನೆಯನ್ನು ಅಮಿತ್ ಷಾ ಅವರು ನೆರವೇರಿಸಲಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದಿಲ್ಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದಿಲ್ಲಿಗೆ ಹೋಗುತ್ತೇನೆಂದು ಪ್ರಶ್ನೆಯೊಂದಕ್ಕೆ ಬಸವರಾಜ ಬೊಮ್ಮಾಯಿ ಉತ್ತರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!