ಹೊಸದಿಗಂತ ಡಿಜಿಟಲ್ ಡೆಸ್ಕ್:
17 ವರ್ಷದ ಬಾಲಕಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿ, ಆಕೆಯ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಬಂಧಿತನನ್ನು ಉನಾಲಿ ಗ್ರಾಮದ ನಿವಾಸಿ ಆಶು ಅಲಿಯಾಸ್ ಫೌಜಿ ಎಂದು ಗುರುತಿಸಲಾಗಿದೆ. ಆತನನ್ನು ಮುಜಫರ್‌ನಗರ-ಡೆಹ್ರಾಡೂನ್ ಹೆದ್ದಾರಿಯಲ್ಲಿರುವ ಖಜುರ್ವಾಲಾ ಗ್ರಾಮದ ಶಾಲೆಯ ಬಳಿ ಬಂಧಿಸಲಾಯಿತು.
ಅಕ್ಟೋಬರ್ 25 ರಂದು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ನಾಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯು ಅಪ್ರಾಪ್ತ ವಯಸ್ಕ ಬಾಲಕಿಯನ್ನು ರಸ್ತೆ ಬದಿಯ ತಿನಿಸುಗಳಿಗೆ ಆಮಿಷ ಒಡ್ಡಿ ಬಾಲಕಿಗೆ ಮಾದಕ ದ್ರವ್ಯ ಬೆರೆಸಿದ ತಂಪು ಪಾನೀಯವನ್ನು ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಆರೋಪಿಯು ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದುಕೊಂಡಿದ್ದಾನೆ ಮತ್ತು ಹಣ ನೀಡದಿದ್ದರೆ ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

