ಪ್ರಧಾನಿ ಮೋದಿ ಅವರ ಕರ್ನಾಟಕ ರಾಜ್ಯ ಪ್ರವಾಸ ಧಿಡೀರ್ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್

ಏಪ್ರಿಲ್ 5ರಂದು ಬೆಂಗಳೂರಿಗೆ ಆಗಮಿಸಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ರದ್ದುಗೊಳಿಸಲಾಗಿದೆ.
ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೋರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದು ಮಾಡಲಾಗಿದೆ.
ಏಪ್ರಿಲ್ 5ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬರಬೇಕಿತ್ತು. ಆದರೆ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆ ರಾಜ್ಯ ಪ್ರವಾಸ ರದ್ದಾಗಿದೆ.
ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!