ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನ. 13ರಿಂದ 19ರ ವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್‍ಯಾಲಿ ಏರ್ಪಡಿಸಲಾಗಿದೆ.
ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ ಜೂ. 30, 2025 ರಿಂದ ಜು. 10, 2025ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು ವರ್ಗವಾರು ರ್‍ಯಾಲಿಗೆ ಕರೆಯಲಾಗಿದೆ.
ಸೇನೆಯಲ್ಲಿ ಎಲ್ಲಾ ವರ್ಗಗಳ ನೋಂದಣಿಗಾಗಿ ರ್‍ಯಾಲಿ ಆಯೋಜಿಸಲಾಗಿದೆ. ನಿಗದಿಪಡಿಸಿದ ವಿಭಾಗಗಳಲ್ಲಿ ದಾಖಲಾತಿಗಾಗಿ ವಯಸ್ಸು, ಶಿಕ್ಷಣ ಅರ್ಹತೆ ಇತರ ಮಾನದಂಡಗಳ ವಿವರಗಳನ್ನು ವೆಬ್‌ಸೈಟ್‌ನಲ್ಲಿ 12 ಮಾರ್ಚ್ 2025 ರಂದು ಪ್ರಕಟಿಸಲಾದ ಅಧಿಸೂಚನೆಯ ಪ್ರಕಾರ ನೀಡಲಾಗಿದೆ.
ಅಭ್ಯರ್ಥಿಗಳು ಯಾವುದೇ ವಂಚಕರು ಅಥವಾ ಮಧ್ಯವರ್ತಿಗಳಿಗೆ ಮಾತಿಗೆ ಕಿವಿಗೊಡಬಾರದು. ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಸಮಯದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ, ನೇಮಕಾತಿ ರ್‍ಯಾಲಿಯ ಸಮಯದಲ್ಲಿ ನಡೆಸುವ ಪರೀಕ್ಷೆಗಳು ಮತ್ತು ಅಂತಿಮ ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

