ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಇಂದು ಎಸ್ಎಸ್ಎಲ್ಸಿ ಎರಡನೇ ದಿನದ ದ್ವಿತೀಯ ಭಾಷಾ ವಿಷಯದ ಪರೀಕ್ಷೆ ನಡೆಡಿದ್ದು, 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.
ಸುಮಾರು 8,68,206 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 8,46,143 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 22,063 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಇನ್ನು ಪರೀಕ್ಷಾ ಅಕ್ರಮ, ಅವ್ಯವಹಾರದಲ್ಲಿ ಯಾರೂ ಭಾಗಿಯಾಗಿಲ್ಲ. ಹಾಗೆ ಯಾವುದೇ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿಲ್ಲ.
ಇನ್ನು ಮೊದಲ ಬಾರಿಗೆ 8,04,923 ವಿದ್ಯಾರ್ಥಿಗಳು ಹಾಜರಾಗಿದ್ದು, 2,598 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.
ಇನ್ನು ಖಾಸಗಿ ಶಾಲೆ ವಿದ್ಯಾರ್ಥಿಗಳು 38,622 ಇದ್ದರು. 195 ವಿದ್ಯಾರ್ಥಿಗಳು ಅನಾರೋಗ್ಯ ಹಿನ್ನೆಲೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದವರು.