ಹೊಸದಿಗಂತ ವರದಿ, ಮಳವಳ್ಳಿ
ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂ. ನಗದು ಹಣ ಮತ್ತು ಚಿನ್ನ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಗಟ್ಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಗದೀಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಬೀಗ ಒಡೆದು ಒಳನುಗ್ಗಿದ ಕಳ್ಳರು ಬೀರುವಿನಲ್ಲಿದ್ದ 1.5 ಲಕ್ಷ ರೂ.ನಗದು, 22 ಗ್ರಾಂ. ತೂಕದ ಚಿನ್ನದ ನೆಕ್ಲೇಸ್, 25 ಗ್ರಾಂ. ತೂಕದ ಚಿನ್ನದ ಸರ, ಮೂರು ಚಿನ್ನದ ಉಂಗುರ ಸೇರಿದಂತೆ 55 ಗ್ರಾಂ ಚಿನ್ನ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಮನೆಯ ಮಾಲೀಕ ಜಗದೀಶ್ ದೂರು ನೀಡಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ್ ಪ್ರಸಾದ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ