ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾರಥ್ಯದಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಮಹತ್ವದ ಸಭೆ ಆರಂಭಗೊಂಡಿದ್ದು, ಮುಂದಿನ ಚುನಾವಣೆಯ ಹಿನ್ನೆಲೆಯಲ್ಲಿ ಈ ಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ.
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ, ಜಗನ್ನಾಥ ರಾವ್ ಜೋಷಿ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿದ ಬಳಿಕ ಅಮಿತ್ ಶಾ ಕೋರ್ ಕಮಿಟಿ ಸಭೆ ಆರಂಭಿಸಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೋರ್ ಕಮಿಟಿ ಸದಸ್ಯರಾದ ಪ್ರಹ್ಲಾದ್ ಜೋಷಿ ಸೇರಿದಂತೆ ಪಕ್ಷ ಮುಖಂಡರುಗಳು ಉಪಸ್ಥಿತರಿದ್ದು, ವಿವಿಧ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ