ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಬಿಜೆಪಿ ಪಕ್ಷದಲ್ಲಿ ಬದಲಾವಣೆಯ ಕೂಗು ಕೇಳಿಬರುತ್ತಿದ್ದು, ಇದರ ಜೊತೆಗೆ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ.
ಇದರ ಪುಷ್ಟಿ ನೀಡುವಂತೆ 3-4 ದಿನಗಳಲ್ಲೇದೆಹಲಿಗೆ ವರಿಷ್ಠರನ್ನು ಭೇಟಿ ಮಾಡೋದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ 2 ದಿನಗಳ ಭೇಟಿ ನೀಡಿದ್ದ ವೇಳೆ . ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದ್ದರು.
ಇದೀಗ ಸಿಎಂ ಬಸವರಾಜ ಬೊಮ್ಮಾಯಿಯವರು 3-4 ದಿನಗಳಲ್ಲೇ ದೆಹಲಿಗೆ ವರಿಷ್ಠರಿಂದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಪಡೆಯೋದಕ್ಕೂ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ನಡೆ ಕುರಿತು ಕಾದುನೋಡಬೇಕಿದೆ.