ಅವಿಶ್ವಾಸ ಮಂಡನೆ ಸ್ಥಗಿತ: ಚುನಾವಣೆಗೆ ಸಿದ್ದರಾಗಿ ಎಂದ ಇಮ್ರಾನ್ ಖಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ಪಾಕ್ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ನಡೆಯಬೇಕಿದ್ದ ಅವಿಶ್ವಾಸ ನಿರ್ಣಯ ಮಂಡನೆ ಸ್ಥಗಿತಗೊಂಡಿದ್ದು, ಹೀಗಾಗಿ ಇಮ್ರಾನ್ ಖಾನ್ ಹಂಗಾಮಿ ಪಾಕ್ ಪ್ರಧಾನಿಯಾಗಿ ಉಳಿದಿದ್ದಾರೆ ಎಂದು ಅಧಿಕೃತ ಹೇಳಿಕೆ ಹೊರ ಬಂದಿದೆ.

ರಾಷ್ಟ್ರೀಯ ಅಸೆಂಬ್ಲಿಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಡೆಪ್ಯುಟಿ ಸ್ಪೀಕರ್ ಖಾಸಿಂ ಸೂರಿ, ‘ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಸಂವಿಧಾನದ 5ನೇ ವಿಧಿಯ ಉಲ್ಲಂಘನೆಯಾಗಿದೆ’ ಎಂದು ಹೇಳಿ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ್ದರು. ಈ ನಡುವೆ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದ್ದವು.

ಇದಾದ ನಂತರ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದ ಇಮ್ರಾನ್ ಖಾನ್, ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸುವಂತೆ ನಾನು ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ. ಪ್ರಜಾಸತ್ತಾತ್ಮಕ ರೀತಿಯಲ್ಲಿ ಚುನಾವಣೆಗಳು ನಡೆಯಬೇಕು. ಚುನಾವಣೆಗೆ ಸಿದ್ಧರಾಗುವಂತೆ ಪಾಕಿಸ್ತಾನದ ಜನರಿಗೆ ಕರೆ ನೀಡುತ್ತೇನೆ ಎಂದರು.
ಇದೀಗ ಪಾಕ್ ಸಂಸತ್​​ ವಿಸರ್ಜನೆಗೊಂಡ ಕಾರಣದಿಂದ ಮುಂದಿನ 90 ದಿನಗಳಲ್ಲಿ ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!