ಹೊಸದಿಗಂತ ಡಿಜಿಟಲ್ ಡೆಸ್ಕ್
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ಜಾರಿ ನಿರ್ದೇಶನಾಲಯವು (ಇಡಿ) ಆಮ್ ಆದ್ಮಿ ನಾಯಕ, ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಕುಟುಂಬಕ್ಕೆ ಸೇರಿದ ಸುಮಾರು 4.81 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವು ತನಿಖೆ ಎದುರಿಸುತ್ತಿರುವ ಕೆಲ ಸಂಸ್ಥೆಗಳೊಂದಿಗೆ ಜೈನ್ ಅವರ ಕುಟುಂಬದ ಸದಸ್ಯರು ಸಂಪರ್ಕ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಸ್ಥೆಗಳನ್ನು ಬಳಸಿಕೊಂಡು ಹವಾಲ ಮಾರ್ಗದ ಮೂಲಕ ದೆಹಲಿ ಮತ್ತು ಸುತ್ತಮುತ್ತಲಿನಲ್ಲಿ ಕೃಷಿ ಭೂಮಿಯನ್ನು ಖರೀದಿಗೆ ಹಾಗೂ ಸಾಲ ಮರುಪಾವತಿಗೆ ಹಣ ವರ್ಗಾಯಿಸಲಾಗಿದೆ ಎಂದು ಇಡಿ ಹೇಳಿದೆ.
ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ