ನೂರು ಕೋಟಿ ಹಗರಣ; ಮಹಾರಾಷ್ಟ್ರ ಮಾಜಿ ಗೃಹ ಸಚಿವ- ಕಾಂಗ್ರೆಸ್‌ ನಾಯಕ ಅನಿಲ್‌ ದೇಶಮುಖ್‌ ಸಿಬಿಐ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ, ಕಾಂಗ್ರೆಸ್‌ ಮುಖಂಡ ಅನಿಲ್ ದೇಶಮುಖ್ ಅವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ೨೦೨೧ರಲ್ಲಿಯೇ ದೇಶಮುಖ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿತ್ತು. ಅವರ ಮೇಲಿನ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡವು ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕಸ್ಟಡಿಗೆ ತೆಗೆದುಕೊಂಡು ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೇಶಮುಖ್ ಅವರು ಗೃಹಸಚಿವರಾಗಿದ್ದಾಗ ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 100 ಕೋಟಿ ರು. ವಸೂಲಿ ಮಾಡುವಂತೆ ಪೊಲೀಸ್ ಅಧಿಕಾರಿ ಸಚಿನ್ ವಝೆ ಅವರಿಗೆ ಆದೇಶಿಸಿದ್ದರು ಎಂದು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆದು ದೇಶಮುಖ್‌ ಬಂಧನವಾಗಿತ್ತು. ಬಳಿಕ ಪ್ರಕರಣವನ್ನು ಸಿಬಿಐ ತನೆಗೆ ಒಪ್ಪಿಸಲಾಗಿದೆ.
ತಮ್ಮ ವಿರುದ್ಧದ ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಕಸ್ಟಡಿಗೆ ಒಪ್ಪಿಸಲು ವಿಶೇಷ ನ್ಯಾಯಾಲಯದ ಆದೇಶಿಸಿದ್ದನ್ನು ಪ್ರಶ್ನಿಸಿ ದೇಶಮುಖ್ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ ಅವರ ಮನವಿಯನ್ನು ತಿರಸ್ಕರಿಸಿತ್ತು.
ಈ ಪ್ರಕರಣದಲ್ಲಿ ಶ್ರೀ ದೇಶಮುಖ್ ಅವರ ಆಪ್ತ ಸಹಾಯಕ ಕುಂದನ್ ಶಿಂಧೆ, ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಝೆ ಅವರನ್ನೂ ಸಿಬಿಐ ವಶಕ್ಕೆ ವಶಕ್ಕೆ ಪಡೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!