March 22, 2026
Sunday, March 22, 2026
spot_img

ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಗಲಕೋಟೆ ಕಾಂಗ್ರೆಸ್‌ ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಎಚ್‌.ವೈ. ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಶಾಸಕ ಎಚ್‌.ವೈ. ಮೇಟಿ ಅವರು ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !