ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಬರೂಚ್ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ದುರಂತದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸ್ಥಳೀಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
ಕಾರ್ಮಿಕರು ರಾಸಾಯನಿಕ ಕರಗಿಸುವ ಪ್ರಕ್ರಿಯೆ ( ಸಾಲ್ವೆಂಟ್ ಡಿಸ್ಟಿಲೇಷನ್) ವೇಳೆ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಬರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸಹಾಯದಿಂದ ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ ಎಂದಿದ್ದಾರೆ.