Wednesday, November 5, 2025

ರೇಣುಕಾ ಸ್ವಾಮಿ ಕೊಲೆ ಕೇಸ್: ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ತಮ್ಮ ಜಾಮೀನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದ ಆದೇಶವನ್ನು ರದ್ದುಗೊಳಿಸುವ ಮೂಲಕ ಆಗಸ್ಟ್ 14 ರಂದು ಪವಿತ್ರಾ ಗೌಡ, ದರ್ಶನ್ ತೂಗುದೀಪ ಮತ್ತು ಇತರ ಐವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ನವೆಂಬರ್ 6 ರಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನು ಪವಿತ್ರ ಗೌಡ ಪುನರ್ ಪರಿಶೀಲನೆ ಅರ್ಜಿ ಸಲ್ಲಿಸಿದ್ದಾರೆ ಎಂದು ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದಾರೆ.

error: Content is protected !!