ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಗೋದಾವರಿ ಜಿಲ್ಲೆಯಿಂದ ಬೇರ್ಪಟ್ಟು ಹೊಸದಾಗಿ ರಚನೆಯಾದ ಮುಸುನೂರು ವಲಯದ ಅಕ್ಕಿರೆಡ್ಡಿಗುಡೆಂನಲ್ಲಿರುವ ಫೋರೆಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದರು. ಈ ದುರಂತದ ಬಳಿಕ ಕಾರ್ಖಾನೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.
ಅಪಘಾತ ನಡೆದ ಸ್ಥಳವನ್ನು ಜಿಲ್ಲಾಧಿಕಾರಿ ಪ್ರಸನ್ನ ವೆಂಕಟೇಶ್ ಪರಿಶೀಲನೆ ನಡೆಸಿ, ಫೋರೆಸ್ ಕಾರ್ಖಾನೆಯನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ತಿಳಿಸಿದರು. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು,ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಹಾಗೂ ಕಾರ್ಖಾನೆ ಮಾಲೀಕರಿಂದ 25 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ಹಾಗೂ ಅಲ್ಪ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.