ಹೊಸದಿಗಂತ ವರದಿ, ವಿಜಯನಗರ
ನಗರದ ಬಟ್ರಹಳ್ಳಿ ಆಂಜನೇಯ ಸ್ವಾಮೀ ದೇಗುಲದ ಬಳಿ ಪ್ರಾರಂಭವಾಗಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ ಅವರು ಮುಖ್ಯವೇದಿಕೆ ಮುಂಭಾಗದಲ್ಲಿ ಶನಿವಾರ ಗೊಪೂಜೆಯನ್ನು ನೆರವೇರಿಸಿದರು.
ಪ್ರವಾಸೋದ್ಯಮ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಗೋ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ಪುಣ್ಯ ಭೂಮಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಈ ಸಭೆ ಮಹತ್ವ ಪಡೆದಿದೆ. ವಿಜಯನಗರ ಗತವೈಭವ ಸಾರುವ ರೀತಿಯಲ್ಲಿ ಈ ಸಭೆಯಲ್ಲಿ ಆಯೋಜನೆ ಮಾಡಲಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವೆ. ಭಾರತ, ಕರ್ನಾಟಕ, ವಿಜಯನಗರ ಕಲ್ಪನೆಯನ್ನು ಇಟ್ಟುಕೊಂಡು ಆಯೋಜನೆ ಮಾಡಲಾಗಿದೆ. ವಿಜಯನಗರ ವೈಭವ ಸಾರುವ ಪ್ರಯತ್ನ ಇದಾಗಿದೆ. ಈ ಸಭೆ ಮಹತ್ವ ಪಡೆದಿದ್ದು, ಮುಂಬರುವ ಚುನಾವಣೆ ಹಾಗೂ ರಾಷ್ಟ್ರೀಯ ಮಟ್ಟದ ವಿದ್ಯಮಾನಗಳ ಕುರಿತು ಚೆರ್ಚೆಗಳು ನಡೆಯಲಿವೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿ.ಎಂ.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ಈ ಸಭೆಯಲ್ಲಿ ಚೆರ್ಚೆಗಳು ನಡೆಯಲಿವೆ. ಈ ಕಾರ್ಯಕಾರಿಣಿ ಸಭೆಯಲ್ಲಿ ಸುಮಾರು600ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಜೀ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಸಿದ್ದರಾಜು, ಸಂಸದ ವೈ.ದೇವೇಂದ್ರಪ್ಪ ಸೇರಿದಂತೆ ಇತರರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ