July 21, 2026
Tuesday, July 21, 2026
spot_img

ನಾವು ಕೂಡ ರೈತರು, ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರಿಗೂ ಅನ್ಯಾಯ ಆಗಬಾರದು, ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಪ್ರತಿಭಟನೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ ಸಚಿವರು,‌ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದೆ. ನಾನು ಬ್ಯೂಸಿ ಇದ್ದ ಕಾರಣ ಮೀಟಿಂಗ್‌ನಲ್ಲಿ ಇರಲಿಲ್ಲ. ನನ್ನ ತಮ್ಮ ಹಾಗೂ ಮಗ ರೈತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

ಕಾರ್ಖಾನೆ ಮಾಲೀಕರು, ರೈತರು ಸೇರಿ ಸಭೆ ಮಾಡುತ್ತೇವೆ. ದರದ ಬಗ್ಗೆ ಮಾತನಾಡಲು ಹೋದರೆ ಬೇರೆ ರೀತಿ ಆಗುತ್ತೆ. ರೈತರಿಗೆ ದಕ್ಕೆಯಾಗದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ‌ಹೇಳಿದರು.

ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹೇಗೆಲ್ಲಾ ಹತ್ತಿಕ್ಕಿತು. ಈ ಹೋರಾಟದಲ್ಲಿ ಎಷ್ಟು ಜನ ರೈತರು ತೀರಿಕೊಂಡರು ಎನ್ನುವುದು ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇರಲಿ.‌ ಸದ್ಯಕ್ಕೆ ನಾನು ಈ ಬಗ್ಗೆ ಏನೂ ಮಾತನಾಡಲ್ಲ ಎಂದು‌ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !