ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ತಮ್ಮ ತವರು ರಾಜ್ಯ ಗುಜರಾತ್ಗೆ ಬೇಟಿ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದಿನಿಂದ ಮೂರು ದಿನಗಳ ಭೇಟಿಗೆ ಗುಜರಾತ್ಗೆ ಆಗಮಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಡಾ.ಟೆಡ್ರೊಸ್ ಘೆಬ್ರೆಯೆಸಸ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಜ.19 ರಂದು ಗುಜರಾತ್ ಜಮ್ನಾನಗರ್ ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಪ್ರದಾಯಿಕ ಜಾಗತಿಕ ಔಷಧ ಕೇಂದ್ರಕ್ಕೆ ಪ್ರಧಾನಿ ಮೋದಿಯವರು ಘೆಬ್ರೆಯೆಸಸ್ ಅವರ ಜೊತೆಗೂಡಿ ಶಂಕುಸ್ಥಾಪನೆ ಮಾಡಲಿದ್ದಾರೆ.
ಏಪ್ರಿಲ್ 20 ರಂದು ಗಾಂಧಿನಗರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆಯ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಈ ಶೃಂಗಸಭೆಯು ಮೂರು ದಿನಗಳ ಕಾಲ ನಡೆಯಲಿದೆ. ಆನಂತರ ನಂತರ ದಾಹೋದ್ನಲ್ಲಿ ನಡೆಯುವ ಆದಿಜಾತಿ ಮಹಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆನಂತರ ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ