ಆಹಾರ ಪ್ರಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 24×7 ಹೊಟೇಲ್ ಓಪನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಧಾನಿ ಬೆಂಗಳೂರಿನಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಹೊಟೇಲ್ ಗಳು ತೆರೆಯಲಿವೆ. ಈ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ರಾಜಧಾನಿಯಲ್ಲಿ ಇನ್ಮುಂದೆ ದಿನದ 24 ಗಂಟೆ, ವಾರದ 7 ದಿನಗಳು ಹೊಟೇಲ್ ಗಳು ಕಾರ್ಯ ನಿರ್ವಹಿಸಲಿವೆ.
ಈ ಕುರಿತು ಹೊಸ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, 24/7 ಎಲ್ಲ ಹೊಟೇಲ್, ಬೇಕರಿ, ಸ್ವೀಟ್ಸ್ ಸ್ಟಾಲ್, ಐಸ್‌‌ಕ್ರಿಂ ಶಾಪ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ರಾಜಧಾನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರ ಅನುಕೂಲಕ್ಕೆಈ ಕ್ರಮತೆಗೆದುಕೊಳ್ಳಲಾಗಿದೆ.
ಸರ್ಕಾರದ ಆದೇಶ ಸ್ವಾಗತಿಸಿರುವ ಬೃಹತ್ ಬೆಂಗಳೂರು ಹೊಟೇಲ್ ಗಳ ಸಂಘ, ಪೊಲೀಸ್ ಇಲಾಖೆಯ ಅನುಮತಿಗೆ ಕಾಯುತ್ತಿವೆ. ಈ ಕುರಿತಂತೆ ಪೊಲೀಸ್ ಇಲಾಖೆಗೆ ಅನುಮತಿ ಕೋರಿ ಹೊಟೇಲ್ ಲ್‌ ಸಂಘದಿಂದ ಪತ್ರ ಬರೆಯಲಾಗಿದೆ‌. ಪೊಲೀಸ್ ಇಲಾಖೆಯ ಅನುಮತಿ ಸಿಕ್ಕ ತಕ್ಷಣವೇ ಹೊಟೇಲ್ ಗಳಲ್ಲಿ 24/7 ಸೇವೆ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!