ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕಬ್ಬು ಬೆಳೆಗಾರರು ತಾವು ಬೆಳೆದ ಪ್ರತಿ ಟನ್ ಕಬ್ಬಿಗೆ 3500 ರೂ. ಕೊಡುವಂತೆ ಆಗ್ರಹಿಸಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಸೇರಿದಂತೆ ಹಲವೆಡೆ ಬೀದಿಗೆ ಇಳಿದಿದ್ದಾರೆ. ಇದೀಗ ಇಂದು ರೈತರು ಸರ್ಕಾರಕ್ಕೆ ಕೊಟ್ಟ ಡೆಡ್ಲೈನ್ ಸಹ ಮುಗಿದಿದ್ದು,ಹೀಗಾಗಿ ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ 4 ಬಂದ್‌ಗೆ ಕರೆ ನೀಡಿದ್ದಾರೆ.
ಈ ಕುರಿತಾಗಿ ಗುರ್ಲಾಪುರ ಕ್ರಾಸ್‌ನಲ್ಲಿ ಹಸಿರು ಸೇನೆ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರತಿಕ್ರಿಯಿಸಿದ್ದು, ನವೆಂಬರ್ 7ರಂದು ರಾಷ್ಟ್ರೀಯ ಹೆದ್ದಾರಿ ನಾಲ್ಕು ಬಂದ್‌ಗೆ ನಿರ್ಧರಿಸಲಾಗಿದೆ. ಬೆಂಗಳೂರು ಪುಣೆ ಹೆದ್ದಾರಿಗುಂಟ, ಜಿಲ್ಲೆ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಂಡ್ಯ, ಮೈಸೂರು, ಶಿವಮೊಗ್ಗ, ಹಾವೇರಿ, ಧಾರವಾಡದಲ್ಲಿ ಧರಣಿ ಮಾಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಎರಡಕ್ಕೂ ರೈತರು ಬೇಡಿಕೆ ಇಟ್ಟಿದ್ದಾರೆ.
ಪ್ರತಿ ಟನ್ ಕಬ್ಬಿಗೆ ಕೇಂದ್ರ, ರಾಜ್ಯ ತಲಾ 5 ಸಾವಿರ ರೂ ತೆರಿಗೆ ತೆಗೆದುಕೊಳ್ಳುತ್ತೆ. ರಾಜ್ಯ, ಕೇಂದ್ರ ಸರ್ಕಾರ ತಲಾ ಒಂದು ಸಾವಿರ ರೂ ತೆರಿಗೆ ಹಣ ರೈತರಿಗೆ ನೀಡಲಿ. ಸಕ್ಕರೆ ಕಾರ್ಖಾನೆಯಿಂದ 3,500, ಕೇಂದ್ರ, ರಾಜ್ಯದಿಂದ 2 ಸಾವಿರ ರೂ.ನಂತೆ. ಆ ಮೂಲಕ ಪ್ರತಿ ಟನ್ ಕಬ್ಬಿಗೆ 5500 ರೂ. ನೀಡಬೇಕೆಂದು ಮತ್ತೊಂದು ಡಿಮ್ಯಾಂಡ್ ಮಾಡಿದ್ದಾರೆ.
ಈ ವಿಚಾರವಾಗಿ ವಿಜಯಪುರದಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ನೀಡಿದ್ದು, ಕೇಂದ್ರ ಸಚಿವ ಅಮಿತ್ ಶಾಗೆ ಮುರುಗೇಶ್ ನಿರಾಣಿ ಪತ್ರ ಬರೆದಿದ್ದಾರೆ. ಸಕ್ಕರೆ ರಫ್ತಾಗುತ್ತಿಲ್ಲ, ಎಥೆನಾಲ್ ಪ್ರೊಡಕ್ಷನ್ ಕಡಿಮೆ ಮಾಡಿದ್ದಾರೆ. ಸರ್ಕಾರ ಕಾರ್ಖಾನೆಗಳು ರೈತರಿಗೆ ಹೆಚ್ಚಿಗೆ ಹಣ ಕೊಡಲು ಕಷ್ಟವಾಗುತ್ತಿದೆ. ಸಕ್ಕರೆ ದರ ಹೆಚ್ಚಳ ಮಾಡುವಂತೆ ಪತ್ರದಲ್ಲಿ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ ಎಂದರು.

