ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಬುಧವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ ಮತ್ತು ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಿದೆ.
ಇನ್ನು ಶಾಲೆಗಳನ್ನು ಮುಚ್ಚದಿರಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ತಜ್ಞರೊಂದಿಗೆ ಸಮಾಲೋಚಿಸಿ ಪ್ರತ್ಯೇಕ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ನೊಂದಿಗೆ ಬರಲು ನಿರ್ಧರಿಸಿದೆ. ಮಾಸ್ಕ್ಗಳ ಕಡ್ಡಾಯ ಬಳಕೆ ಕುರಿತು ಸರ್ಕಾರ ಶೀಘ್ರದಲ್ಲೇ ಅಧಿಕೃತ ಆದೇಶವನ್ನು ಹೊರಡಿಸುವ ನಿರೀಕ್ಷೆಯಿದೆ.