July 21, 2026
Tuesday, July 21, 2026
spot_img

WEATHER | ಮಳೆ ಮುಗೀತು ಅನ್ಕೋಬೇಡಿ! ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವು ಕಡೆ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಲಘು ಮಳೆಯ ಸಾಧ್ಯತೆ ಇದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !