ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೋರಿಸ್ ಜಾನ್ಸನ್ ಯುನೈಟೆಡ್ ಕಿಂಗ್ಡಮ್ನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಲಂಡನ್ನಿಂದ ಗುರುವಾರ (ಏಪ್ರಿಲ್ 21) ಬೆಳಗ್ಗೆ ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗವರ್ನರ್ ಆಚಾರ್ಯ ದೇವವ್ರತ್ ಅವರು ಯುಕೆ ಪ್ರಧಾನಿಗೆ ವಿಮಾನ ನಿಲ್ದಾಣದಲ್ಲಿ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು
UK PM Boris* Johnson arrives in Ahmedabad, Gujarat. He is on a 2-day India visit pic.twitter.com/yzwlX5Dppg
— ANI (@ANI) April 21, 2022
ಪ್ರಧಾನಿ ಜಾನ್ಸನ್ ಇಂದಿನಿಂದ ಎರಡು ದಿನಗಳ ಭಾರತದಲ್ಲಿ ಪ್ರವಾಸ ಮಾಡಲಿದ್ದಾರೆ. ಮುಕ್ತ ವ್ಯಾಪಾರ, ಇಂಧನ ಕ್ಷೇತ್ರ ಮತ್ತು ರಕ್ಷಣಾ ವಿಷಯದಲ್ಲಿ ಅಗತ್ಯ ಸಂಬಂಧಗಳನ್ನು ಕಾಪಾಡಿಕೊಳ್ಳುವ ಪ್ರಯತ್ನಗಳ ಭಾಗವಾಗಿ ಯುಕೆ ಪ್ರಧಾನಿ ದೇಶಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.
ಯುಕೆ ಪ್ರಧಾನಿ ಅಹಮದಾಬಾದ್ನಲ್ಲಿ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾರತ-ಬ್ರಿಟನ್ ವ್ಯಾಪಾರ ಮತ್ತು ಸಾರ್ವಜನಿಕ ಸಂಬಂಧಗಳ ಕುರಿತು ಚರ್ಚೆ ನಡೆಯಲಿದೆ. ಕೈಗಾರಿಕೆಗಳಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ವೈದ್ಯಕೀಯ ಮತ್ತು ವೈಜ್ಞಾನಿಕ ಕ್ಷೇತ್ರಗಳಿಗೆ ಸಂಬಂಧಿಸಿದ ವಿವಿಧ ಅಂಶಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.
ನಾಳೆ ದೆಹಲಿಗೆ ತೆರಳಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರು ರಕ್ಷಣೆ, ಮುಕ್ತ ವ್ಯಾಪಾರ ಮತ್ತು ಇಂಧನ ಭದ್ರತೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ. ರಷ್ಯಾ-ಉಕ್ರೇನ್ ಯುದ್ಧದ ವಿಷಯವೂ ಇಬ್ಬರ ನಡುವೆ ಚರ್ಚೆಯಾಗುವ ಸಾಧ್ಯತೆಯಿದೆ.