ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.
ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತೆಲಂಗಾಣ ಮೂಲದವರು ಎಂಬುದು ತಿಳಿದುಬಂದಿದೆ. ಅವರೆಲ್ಲ ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದರು.
ಭೀಕರ ಅಪಘಾತ: ತೆಲಂಗಾಣದ ಮೂವರು ಭಕ್ತರ ದುರ್ಮರಣ

