ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ,ಕಲಬುರಗಿ:

ಕಲ್ಯಾಣ ಕನಾ೯ಟಕ ಪ್ರದೇಶಾಭಿವೃದ್ಧಿಮಂಡಳಿ, ನಂಜುಂಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಗ್ರ್ಯಾಂಡ್ ಹೋಟೆಲ್, ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ ಕೆಕೆಆರ್‍ಡಿಬಿಗೆ 3000 ಕೋಟಿ ರೂ. ಅನುದಾನ ಮೀಸಲಿದೆ. ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಪೌಷ್ಟಿಕತೆ, ಮಾನವ ಸಂಪನ್ಮೂಲ ಕೌಶಲ್ಯ ಒತ್ತು ನೀಡಲಾಗುವುದು. ರಾಜ್ಯದ ಸರಾಸರಿಗಿಂತ ಕಡಿಮೆ ಸಾಧನೆ ಮಾಡಿರುವ ತಾಲ್ಲೂಕುಗಳನ್ನು ಅಭಿವೃದ್ಧಿ ಆಕಾಂಕ್ಷಿ 104 ತಾಲ್ಲೂಕುಗಳನ್ನು ಹಾಗೂ 100 ತಾಲ್ಲೂಕುಗಳನ್ನು ಆರೋಗ್ಯ ಸೇವೆ ಬಲಪಡಿಸಲು ಗುರುತಿಸಲಾಗಿದೆ. ಇದರಲ್ಲಿ ಹೆಚ್ಚು ತಾಲ್ಲೂಕುಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿವೆ ಎಂದರು.

371 ಜೆ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ನಂಜುಡಪ್ಪ ವರದಿ ಅನುಷ್ಟಾನಕ್ಕೆ ಸಚಿವ ಸಂಪುಟದ ಉಪಸಮಿತಿ ಶಿಫಾರಸ್ಸು ಮಾಡಿದೆ. ಎಸ್‍ಡಿಪಿ ಯೋಜನೆ ಪ್ರಕಾರ ಹೆಚ್ಚು ಹಣವನ್ನು ನೀಡಲಾಗುವುದು. ಕಳೆದ ವರ್ಷದ ಅನುದಾನ 14192 ಕೋಟಿ ರೂ. ಜನವರಿಯಲ್ಲಿಯೇ ಬಿಡುಗಡೆ ಮಾಡಲಾಗಿದೆ. ಈ ಭಾಗದ ಯೋಜನೆಗಳಿಗೆ ಹಣದ ಕೊರತೆ ಆಗುವುದಿಲ್ಲ. ಕೆಕೆಆರ್‍ಡಿಬಿ ಕ್ರಿಯಾ ಯೋಜನೆಗಳ ಅನುಮೋದನೆಯನ್ನು ಏಪ್ರಿಲ್ 30ರೊಳಗೆ ಮಾಡಬೇಕೆಂದು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಮೆಗಾ ಟೆಕ್ಸ್ ಟೈಲ್ ಪಾರ್ಕ್

ಕರ್ನಾಟಕ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಕಲ್ಬುರ್ಗಿ ಹಾಗೂ ವಿಜಯಪುರಲದಲ್ಲಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ಮೂಲಸೌಕರ್ಯ ಸೇರಿದಂತೆ ಎಲ್ಲ ನೆರವು ಕೋರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ಲಕ್ಷ್ಮಣ ಸವಧಿ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!