ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ವಿಶ್ವವಿದ್ಯಾನಿಲಯದ 40ನೇ ಘಟಿಕೋತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರಿಗೆ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಯಿತು.
ಶ್ರೀ ಗಳ ‘ಸಂಸ್ಕೃತ-ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೊಡುಗೆ ಒಂದು ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಯಿತು.