ಹೊಸದಿಗಂತ ವರದಿ ಧಾರವಾಡ:
ಹುಬ್ಬಳ್ಳಿಯ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಸಮಾರಂಭ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬುಧವಾರ ನಡೆಯಿತು.
ಅಲ್ಲದೇ, 2022-23 ಹಾಗೂ 2023-24ನೇ ಸಾಲಿನ ಸುಮಾರು 7,716 ವಿದ್ಯಾರ್ಥಿಗಳಿಗೆ ವಿವಿಧ ಕಾನೂನು ಪದವಿ, 150 ವಿದ್ಯಾರ್ಥಿಗಳಿಗೆ ರ್ಯಾಂಕ್ ಹಾಗೂ 28 ಚಿನ್ನದ ಪದಕ ಹಾಗೂ ನಗದು ಬಹುಮಾನ ವಿತರಣೆ ಮಾಡಲಾಯಿತು.
ಆಂಧ್ರಪ್ರದೇಶ ರಾಜ್ಯಪಾಲ ಎಸ್. ಅಬ್ದುಲ್ ನಜೀರ್, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ, ಬೆಂಗಳೂರಿನ ಹಿರಿಯ ವಕೀಲ ವಿ. ಸುದೇಶ ಪೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ರಾಜ್ಯಪಾಲ ಥಾವರಚಂದ್ ಗೆಹಲೋತ್, ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ. ಎಚ್.ಕೆ. ಪಾಟೀಲ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಾ. ಶಿವರಾಜ ಪಾಟೀಲ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

