Thursday, November 6, 2025

ಮತದಾನಕ್ಕೆ ಒಂದೇ ದಿನ ಬಾಕಿ ಇರುವಂತೆ ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ.

ಜೆಡಿಯು ನಾಯಕ ನಿರಂಜನ್ ಕುಶ್ವಾಹ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ.

ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಮೃತ ನವೀನ್ ಕುಶ್ವಾಹ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ನ.6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. 18 ಜಿಲ್ಲೆಗಳ 121 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂಡಿಯಾ ಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್, ಎನ್‌ಡಿಎ ಆಡಳಿತ ಡಿಸಿಎಂಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸೇರಿ ಅನೇಕರು ಕಣದಲ್ಲಿದ್ದಾರೆ. ಉಳಿದ 122 ಸ್ಥಾನಗಳಿಗೆ ನ.11ರಂದು ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.

error: Content is protected !!