Thursday, November 6, 2025

ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ: ರಾಗಾ ಹೊಸ ರಾಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೊಸ ಬಾಂಬ್‌ ಸಿಡಿಸಿದರು.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು. ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲೂ ಇದೇ ರೀತಿಯ ದೂರು ಬಂದಿದ್ದವು. ಈಗ ನಾವು ಹರಿಯಾಣವನ್ನ ಕೇಂದ್ರೀಕರಿಸಿದ್ದೇವೆ ಎಂದು ತಿಳಿಸಿದ್ರು.

ಹರಿಯಾಣ ಚುನಾವಣೆ ವೇಳೆ ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ 52 ರಿಂದ 62 ಸ್ಥಾನಗಳಷ್ಟು ಮುಂದಿತ್ತು. ಅದರಂತೆ ಹರಿಯಾಣ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಸ್ವೀಪ್ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಫಲಿತಾಂಶ ಸಂಪೂರ್ಣ ವಿಭಿನ್ನವಾಗಿತ್ತು. ಹರಿಯಾಣದಲ್ಲಿ ಫಸ್ಟ್‌ ಟೈಮ್‌ ಅಂಚೆ ಮತಗಳು ಮತ್ತು ಸಾಮಾನ್ಯ ಮತಗಳಲ್ಲಿ ವ್ಯತ್ಯಾಸ ಆಗಿರುವುದು ಕಂಡುಬಂದಿತು ಎಂದು ಆರೋಪಿಸಿದರು.

error: Content is protected !!