ಮಂಗಳೂರಿನಲ್ಲಿ ರೌಡಿಶೀಟರ್ ರಾಹುಲ್ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಂಗಳೂರಿನ ಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ರಾಹುಲ್ ಅಲಿಯಾಸ್ ಕಕ್ಕೆ ರಾಹುಲ್ (26) ಕೊಲೆಯಾದ ರೌಡಿಶೀಟರ್. ನಗರದ ಹೊಯಿಗೆ ಬಝಾರ್ ನಿವಾಸಿಯಾಗಿದ್ದ ರಾಹುಲ್​​​ನನ್ನು, ಮಾರಕಾಸ್ತ್ರದಿಂದ ಹತ್ಯೆ ನಡೆಸಿ‌ ಅಪರಿಚಿತರ ಗುಂಪು ಪರಾರಿಯಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆ, ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನೆಯಾಗಿದ್ದು, ಆಸ್ಪತ್ರೆಗೆ ‌ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಾಂಡೇಶ್ವರ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here